Bhagavad GitA in Kannada(ಭಗವದ್ಗೀತೆ ಕನ್ನಡದಲ್ಲಿ)

Bhagavad GitA- Kannada Meaning and interpretation of each Shloka.
Reference: Discourse on GitA By Bannanje Govindachaarya .
ಭಗವದ್ಗೀತೆ ಕನ್ನಡದಲ್ಲಿ. ಆಧಾರ: ಬನ್ನಂಜೆ ಗೋವಿಂದಾಚಾರ್ಯರ ಗೀತಾ ಪ್ರವಚನ
ಭಗವದ್ಗೀತೆಯಲ್ಲಿ ಅಡಗಿರುವ ಅಪೂರ್ವ ಅರ್ಥಸಾರಾಂಶ ಹಾಗು ದೈನಂದಿನ ಜೀವನದಲ್ಲಿ
ಭಗವದ್ಗೀತೆಯ ಮಹತ್ವವನ್ನು ಇಲ್ಲಿ ವಿವರಿಸಲಾಗಿದೆ. ಗೀತೆ ಒಂದು ಜಾತಿಗೆ ಅಥವಾ ಮತಕ್ಕೆ ಮಾತ್ರ ಸಂಬಂಧಪಟ್ಟಿದ್ದಲ್ಲ, ಇದು ಮಾನವನ ಜೀವನ್ಮೌಲ್ಯವನ್ನು ಎತ್ತಿ ಹಿಡಿಯುವ ಕೈಗನ್ನಡಿ.
ಮಹಾಭಾರತ ಹೇಳುವುದು ಐದು ಸಾವಿರ ವರ್ಷಗಳ ಹಿಂದೆ ಕೌರವ ಪಾಂಡವರ ನಡುವೆ ನಡೆದ ಇತಿಹಾಸವನ್ನಲ್ಲ. ಇದು ನಮ್ಮ ಜೀವನದ, ಮುಖ್ಯವಾಗಿ ಅಂತರಂಗ ಪ್ರಪಂಚದ ನಿರಂತರ ಹೋರಾಟದ ಚಿತ್ರಣ. ನಮ್ಮ ಜೀವನವೇ ಒಂದು ಸಂಗ್ರಾಮ. ನಮ್ಮ ಹೃದಯರಂಗವೇ ಕುರುಕ್ಷೇತ್ರ. ಅದರೊಳಗೆ ನಮ್ಮನ್ನು ದಾರಿ ತಪ್ಪಿಸುವ ಕೌರವರಿದ್ದಾರೆ, ಎಚ್ಚರಿಸುವ ಪಾಂಡವರೂ ಇದ್ದಾರೆ. ಹದಿನೆಂಟು ಅಕ್ಷೋಹಿಣಿ ಸೇನೆಯೂ ಇದೆ. ಆದರೆ ನಮ್ಮ ಹೋರಾಟದಲ್ಲಿ ಪಾಂಡವರು ಸೋತು ಕೌರವರು ಗೆದ್ದುಬಿಡುವ ಸಂಭವ ಹೆಚ್ಚು. ಆದರೆ ಹಾಗಾಗದೆ ನಮ್ಮಲ್ಲೂ ಪಾಂಡವರೇ ಗೆಲ್ಲಬೇಕು. ಅದಕ್ಕಾಗಿ ನಮ್ಮ ಬಾಳ ರಥದ ಸಾರಥ್ಯವನ್ನು ಆ ಭಗವಂತನ ಕೈಗೊಪ್ಪಿಸಬೇಕು. ಇದೇ ನರ(ಅರ್ಜುನ)ನ ಮೂಲಕ ನಮಗೆ ನಾರಾಯಣನಿತ್ತ ಗೀತೋಪದೇಶ. ಜ್ಞಾನ ಸಂದೇಶ(Theory) ಮತ್ತು ಅದರ ಪ್ರಾಯೋಗಿಕ ನಿರೂಪಣೆಯನ್ನು(Practical presentation) ನಮಗೆ ಭಗವಂತ ನೀಡಿರುವುದು ಮಹಾಭಾರತದ ಮೂಲಕ.

Saturday, December 24, 2011

Bhagavad GitA kannada Chapter-17 Shloka 7-10



ಆಹಾರಸ್ತ್ವಪಿ ಸರ್ವಸ್ಯ ತ್ರಿವಿಧೋ ಭವತಿ ಪ್ರಿಯಃ ।
ಯಜ್ಞಸ್ತಪಸ್ತಥಾ ದಾನಂ ತೇಷಾಂ ಭೇದಮಿಮಂ ಶೃಣು                      ॥೭॥

ಆಹಾರಃ ತು ಅಪಿ  ಸರ್ವಸ್ಯ ತ್ರಿವಿಧಃ  ಭವತಿ ಪ್ರಿಯಃ ।
ಯಜ್ಞ ತಪಃ ತಥಾ ದಾನಂ ತೇಷಾಂ ಭೇದಮ್ ಇಮಮ್ ಶೃಣು ಎಲ್ಲರೂ ಉಣ್ಣುವ ಆಹಾರವೂ ಮೂರು ತೆರನಾಗಿ ಮೆಚ್ಚಿಗೆಯಾಗುತ್ತದೆ. ಯಜ್ಞತಪಸ್ಸುದಾನ ಕೂಡ. ಅವುಗಳ ಈ ಬಗೆಯನ್ನಾಲಿಸು.

ನಾವು ತಿನ್ನುವ ಆಹಾರ ಕೂಡ ಮೂರು ತೆರನಾಗಿರುತ್ತದೆ. ಸಾತ್ವಿಕರಾಜಸ ಮತ್ತು ತಾಮಸ ಆಹಾರ. ಅನ್ನಂ ಅಷಿತಂ ತ್ರೇಧಾ ವಿಧ್ಯತೆ”  (ಛಾಂದೋಗ್ಯೋಪನಿಷತ್-೫-೧) ಎನ್ನುವಂತೆ ನಾವು ಸೇವಿಸುವ ಆಹಾರವನ್ನು ನಮ್ಮೊಳಗಿರುವ ಪ್ರಾಣ ಮತ್ತು ವೈಶ್ವಾನರರು ಮೂರು ಬಗೆಯನ್ನಾಗಿ(ಸೂಕ್ಷ್ಮಸ್ಥೂಲ ಮತ್ತು ಸ್ಥೂಲ) ವಿಂಗಡಿಸಿ  ಅದನ್ನು ದೇಹದ ವಿವಿಧ ಭಾಗಗಳಿಗೆ ಸರಬರಾಜು ಮಾಡುತ್ತಾರೆ. ನಮ್ಮ ಆಹಾರಕ್ಕೂ ಮನಸ್ಸಿಗೂ ನೇರ ಸಂಬಂಧವಿದೆ. ಇದನ್ನು ನಮ್ಮ ಪ್ರಾಚೀನರು ಅರಿತಿದ್ದರು. ಅದಕ್ಕಾಗಿ ಮನಸ್ಸಿನ ಮೇಲೆ ಪ್ರಭಾವ ಬೀರುವ ಆಹಾರವನ್ನು ಅವರು ನಿಷೇಧಿಸಿದರು. ಉದಾಹರಣೆಗೆ ಬೆಳ್ಳುಳ್ಳಿ. ಇದು ಔಷಧೀಯ ವಸ್ತು. ಆದರೆ ಇದನ್ನು ನಿತ್ಯ ಆಹಾರದಲ್ಲಿ ಬಳಸುವುದನ್ನು ನಿಷೇಧಿಸಿದ್ದಾರೆ. ಏಕೆಂದರೆ ಇದು ನಮ್ಮ ಬುದ್ಧಿ ಬೆಳವಣಿಗೆಗೆ ಪೂರಕವಲ್ಲ. ಇದೇ  ರೀತಿ  ನುಗ್ಗೆಕಾಯಿತೊಂಡೇಕಾಯಿ ಇತ್ಯಾದಿ. ಅಧ್ಯಯನ ಮಾಡುವವರಿಗೆ ಇದು ನಿಷಿದ್ಧ (ಔಷಧವಾಗಿ ಬಳಸಬಹುದು). ಹೀಗೆ ಮನುಷ್ಯನ ಬುದ್ಧಿಗೆ ಯಾವ ವಿಧದ ಆಹಾರ ಸೂಕ್ತ ಎನ್ನುವುದನ್ನು ಮೊತ್ತ ಮೊದಲ ಬಾರಿಗೆ ಕೃಷ್ಣ ಜಗತ್ತಿಗೆ  ಕೊಟ್ಟ.
ಆಹಾರದ ಜೊತೆಗೆ ನಾವು ಮಾಡುವ ದೇವರ ಪೂಜೆತಪಃನಮ್ಮ ಚಿಂತನಾ ಕ್ರಮದಾನಜೀವನದ ನಡೆಮಾತು ಎಲ್ಲವುದರಲ್ಲೂ ಈ ಮೂರು ವಿಧವನ್ನು ಗುರುತಿಸಬಹುದು. ಕೃಷ್ಣ ಮುಂದಿನ ಶ್ಲೋಕಗಳಲ್ಲಿ ಆಹಾರಯಜ್ಞತಪಸ್ಸು ಮತ್ತು ದಾನದಲ್ಲಿ ಈ ಮೂರು ಬಗೆಯನ್ನು ಗುರುತಿಸುವುದು ಹೇಗೆ ಎನ್ನುವುದನ್ನು ವಿವರಿಸುತ್ತಾನೆ.    

ಆಯುಃಸತ್ವಬಲಾರೋಗ್ಯಸುಖಪ್ರೀತಿವಿವರ್ಧನಾಃ ।
ರಸ್ಯಾಃ ಸ್ನಿಗ್ಧಾಃ ಸ್ಥಿರಾ ಹೃದ್ಯಾ ಆಹಾರಾಃ ಸಾತ್ವಿಕಪ್ರಿಯಾಃ                ॥೮॥

ಆಯುಃ ಸತ್ವ ಬಲ ಆರೋಗ್ಯ ಸುಖ ಪ್ರೀತಿ ವಿವರ್ಧನಾಃ ।
ರಸ್ಯಾಃ ಸ್ನಿಗ್ಧಾಃ ಸ್ಥಿರಾ ಹೃದ್ಯಾಃ ಆಹಾರಾಃ ಸಾತ್ವಿಕ ಪ್ರಿಯಾಃ ಇವು ಸಾತ್ವಿಕರಿಗೆ ಮೆಚ್ಚಿಕೆಯಾದ ತಿನಿಸುಗಳು: ಆಯುಸ್ಸುಒಳ್ಳೆಯತನತ್ರಾಣಆರೋಗ್ಯವನ್ನು ಹೆಚ್ಚಿಸುವಂಥವುಬಹಳ ಕಾಲ ಮೆಚ್ಚಿಕೆಯಾಗುವಂಥವುತಿಂದಾಗ ಖುಷಿಯಾಗುವಂಥವುರುಚಿಯಾದಂಥವುಕಸುವಿರುವಂಥವುಧೀರ್ಘಕಾಲ ಪರಿಣಾಮ ಬೀರುವಂಥವುಮತ್ತೆಮತ್ತೆ ಮನ ಸೆಳೆಯುವಂಥವು.

ಈ ಶ್ಲೋಕದಲ್ಲಿ ಕೃಷ್ಣ ಸಾತ್ವಿಕ ಆಹಾರದ ಬಗ್ಗೆ ವಿವರಿಸಿದ್ದಾನೆ. ಯಾವ ಆಹಾರ ನಮ್ಮ  ಆಯುಸ್ಸಿನ ವೃದ್ಧಿಗೆ ಪೂರಕವೋಯಾವ ಆಹಾರ ನಮಗೆ ಸೌಮ್ಯ ಸ್ವಭಾವವನ್ನು ಕೊಡುತ್ತದೋ;  ಯಾವ ಆಹಾರ ದೇಹಕ್ಕೆ ಪೌಷ್ಟಿಕಾಂಶವನ್ನು ಕೊಡುತ್ತದೋಯಾವ ಆಹಾರ ಆರೋಗ್ಯವನ್ನು ಕೊಡುತ್ತದೋ ಅಂತಹ ಆಹಾರ ಸಾತ್ವಿಕ ಆಹಾರ. ಈ ಆಹಾರವನ್ನು ನೋಡಿದಾಗ ನಮಗೆ ಕೆಟ್ಟ ಭಾವನೆ ಬರುವುದಿಲ್ಲ. ಅದು ರಸವತ್ತಾಗಿರುತ್ತದೆರುಚಿಯಾಗಿರುತ್ತದೆ. ಇದನ್ನು ತಿಂದಾಗ ನಮ್ಮ ಹೊಟ್ಟೆ ತುಂಬುತ್ತದೆ ಮತ್ತು ತಕ್ಷಣ ಹಸಿವೆಯಾಗುವುದಿಲ್ಲ. ನೋಡಲು ಹೃದಯಂಗಮವಾಗಿರುತ್ತದೆತಿಂದ ನೆನಪು ಉಳಿಯುವಂತಿರುತ್ತದೆ. 
ನಿಜವಾದ ಸಾತ್ವಿಕರು ಏನು ತಿನ್ನುತ್ತಾರೋ ಅದು ಸಾತ್ವಿಕ ಆಹಾರವಾಗಿರುತ್ತದೆ. ಪ್ರಕೃತಿ ಸಹಜವಾದರಸವತ್ತಾದರುಚಿಯಾದ, ಹಣ್ಣು-ಹಂಪಲುಗಡ್ಡೆ-ಗೆಣಸುಬೇಳೆ-ಕಾಳುಕಂದ-ಮೂಲಗಳು ಸಾಮಾನ್ಯವಾಗಿ ಸಾತ್ವಿಕ ಆಹಾರವಾಗಿರುತ್ತದೆ. ಆಯುಸ್ಸನ್ನು ಹೆಚ್ಚಿಸುವ ಶುದ್ಧ ತುಪ್ಪ(ಮಿತವಾಗಿ ಬಳಸಿದಾಗ) ಸಾತ್ವಿಕ ಆಹಾರ.  

ಕಟ್ವಮ್ಲಲವಣಾತ್ಯುಷ್ಣತೀಕ್ಷ್ಣರೂಕ್ಷವಿದಾಹಿನಃ ।
ಆಹಾರಾ ರಾಜಸಸ್ಯೇಷ್ಟಾ ದುಃಖಶೋಕಾಮಯಪ್ರದಾಃ                     ॥೯॥

ಕಟು ಆಮ್ಲ ಲವಣ ಅತಿ ಉಷ್ಣ ತೀಕ್ಷ್ಣ ರೂಕ್ಷ ವಿದಾಹಿನಃ ।
ಆಹಾರಾಃ ರಾಜಸಸ್ಯ ಇಷ್ಟಾ ದುಃಖ ಶೋಕ ಆಮಯ ಪ್ರದಾಃ ಇವು ರಾಜಸರಿಗೆ ಮೆಚ್ಚಿಕೆಯಾದ ತಿನಿಸುಗಳು: ಅತಿಯಾದ ಖಾರಹುಳಿಉಪ್ಪುತುಂಬ ಬಿಸಿಬಿರುಸುನೀರಸ ಮತ್ತು ಉರಿಬರಿಸುವಂಥವುದುಃಖ-ದುಮ್ಮಾನ ಮತ್ತು ಖಾಯಿಲೆ ಬರಿಸುವಂಥವು.

ಇಲ್ಲಿ ರಾಜಸ ಆಹಾರದ ವಿವರಣೆಯನ್ನು ಕೃಷ್ಣ ಕೊಟ್ಟಿದ್ದಾನೆ. ವಿಪರೀತ ಖಾರವಿಪರೀತ ಹುಳಿಅತಿ ಉಪ್ಪುರಾಜಸ ಆಹಾರವೆನಿಸುತ್ತದೆ. ಅತಿಯಾದ ಬಿಸಿಯನ್ನು ಕುಡಿಯುವುದುಬಿರುಸು ಮತ್ತು ನೀರಸವಾದ ಆಹಾರವನ್ನು ಸೇವಿಸುವುದುಎದೆ ಸುಡುವ ಆಹಾರ ಸೇವನೆ-ಇವು ರಾಜಸರ ಲಕ್ಷಣವಾಗಿರುತ್ತದೆ. ಈ ಆಹಾರ ಸೇವನೆಯಿಂದ ಮಾನಸಿಕ ಮತ್ತು  ದೈಹಿಕ ವೇದನೆ ಹೆಚ್ಚುತ್ತದೆ. ಇದು ಖಾಯಿಲೆಯನ್ನು ತರಬಲ್ಲ ಆಹಾರ.
ಹಸಿಮೆಣಸಿನ ಕಾಯಿಯನ್ನು ನೇರವಾಗಿ ತಿನ್ನುವುದುಹುಣಸೇ ಹಣ್ಣನ್ನು ಅತಿಯಾಗಿ ತಿನ್ನುವುದುಯಾವಾಗಲೂ ಹೆಚ್ಚು ಉಪ್ಪನ್ನು ಬಳಸುವುದುಗಂಟಲು ಸುಡುವ ಕಾಫಿ ಕುಡಿಯುವುದುಅತಿಯಾಗಿ ಸಾಸಿವೆ ಮತ್ತು ಮಸಾಲೆ ಬಳಸುವುದುರಸವಿಲ್ಲದ ಆಹಾರ(Ex:Chewing gum) ಸೇವನೆ;  ಇತ್ಯಾದಿ ರಾಜಸರ ಆಹಾರ ಕ್ರಮಕ್ಕೆ ಕೆಲವು ಉದಾಹರಣೆಗಳು.[ಒಂದು ವೇಳೆ ಇಲ್ಲಿ ಹೇಳಿದ ಈ ಆಹಾರವನ್ನು ರೋಗ ಪರಿಹಾರಕ್ಕಾಗಿ ವೈದ್ಯರು ಸೂಚಿಸಿದ್ದರೆ ಅದು ಸಾತ್ವಿಕ ಆಹಾರವೆನಿಸುತ್ತದೆ].

ಯಾತಯಾಮಂ ಗತರಸಂ ಪೂತಿ ಪರ್ಯುಷಿತಂ ಚ ಯತ್ ।
ಉಚ್ಛಿಷ್ಟಮಪಿ ಚಾಮೇಧ್ಯಂ ಭೋಜನಂ ತಾಮಸಪ್ರಿಯಮ್                ॥೧೦॥

ಯಾತಯಾಮಂ ಗತರಸಂ ಪೂತಿ ಪರ್ಯುಷಿತಂ ಚ ಯತ್ ।
ಉಚ್ಛಿಷ್ಟಮ್ ಅಪಿ ಚ ಅಮೇಧ್ಯಂ ಭೋಜನಂ ತಾಮಸ ಪ್ರಿಯಮ್ – ಇದು ತಾಮಸರಿಗೆ ಮೆಚ್ಚಿನ ತಿನಿಸು: ಅಟ್ಟು ಜಾವ ಕಳೆದದ್ದುರುಚಿ ಕಳೆದುಕೊಂಡದ್ದುಹಳಸಿದ್ದುತಂಗಳಾದದ್ದುಎಂಜಲು ಮತ್ತು ಕೊಳಕಾದದ್ದು.

ತಾಮಸರಿಗೆ ಜೀವನದಲ್ಲಿ ಅತಿದೊಡ್ಡ ಸಂಗತಿ ಎಂದರೆ ಭೋಜನ. ಇವರು ಆಹಾರವನ್ನು ದೇವರಿಗೆ ಸಮರ್ಪಿಸದೆ ಸೇವನೆ ಮಾಡುತ್ತಾರೆ. ನೀರಸವಾದಹಳಸಿದವಾಸನೆ ಬರುವರುಚಿಗೆಟ್ಟ ಆಹಾರ ತಾಮಸರಿಗೆ ಇಷ್ಟ. ಇವರು ಎಂಜಲು ಊಟವನ್ನು ಇಷ್ಟಪಡುತ್ತಾರೆ. [ಉದಾಹರಣೆಗೆ ಒಂದೇ ತಟ್ಟೆಯಲ್ಲಿ ಅನೇಕ ಮಂದಿ ಎಂಜಲು ಹಂಚಿಕೊಂಡು ತಿನ್ನುವುದು].

ಹೀಗೆ ಆಹಾರದಿಂದ ಹೇಗೆ ವ್ಯಕ್ತಿಯನ್ನು ಗುರುತಿಸಬಹುದು ಎನ್ನುವ ವಿಧಾನವನ್ನು ವಿವರಿಸಿದ ಕೃಷ್ಣಮುಂದೆ ನಮ್ಮ ಆಚಾರದಿಂದ(ಯಜ್ಞತಪಸ್ಸುದಾನ) ವ್ಯಕ್ತಿಯ ಸ್ವಭಾವವನ್ನು ಅರಿಯುವ ವಿಧಾನವನ್ನು ವಿವರಿಸುತ್ತಾನೆ.

No comments:

Post a Comment